ಬೆಂಗಳೂರು: ಕರ್ನಾಟಕ ಸರ್ಕಾರವು ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕಾಗಿ ಮಹತ್ವದ ಹೊಸ ಆದೇಶವನ್ನು ಹೊರಡಿಸಿದ್ದು ಅದರಂತೆ ಇನ್ಮುಂದೆ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡಾ 2% ಮೀಸಲಾತಿಯನ್ನು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಸರಕಾರದ ಈ ಮಹತ್ವದ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಪರವಾಗಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು ಆಗಿರುವ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹ್ಯಾಂಡ್ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್, ಕಬಡ್ಡಿ, ಕುಸ್ತಿ ಸೇರಿದಂತೆ ಒಟ್ಟು 34 ವಿಭಿನ್ನ ಕ್ರೀಡೆಗಳಲ್ಲಿ ರಾಜ್ಯ ಅಥವಾ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ವಿಶೇಷ ಆದ್ಯತೆ ಮತ್ತು ಅವಕಾಶ ದೊರೆಯಲಿದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡಾಪಟುಗಳು 10ನೇ ತರಗತಿಯಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಿದೆ. ಶಾಲಾ, ತಾಲೂಕು, ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದವರೆಗೆ ಆಡಿ ಸಾಧನೆ ಮಾಡಲು ಪ್ರಯತ್ನಿಸುವ ಜೊತೆಗೆ ಕ್ರೀಡಾ ಪ್ರಮಾಣಪತ್ರಗಳನ್ನು ಭದ್ರವಾಗಿ ಕಾಯ್ದಿರಿಸಿಕೊಂಡಲ್ಲಿ ಭವಿಷ್ಯ ಉಜ್ವಲವಾಗಲಿದೆ. ಓದಿನಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲೂ ಸಾಧನೆ ಮಾಡುವ ಮೂಲಕ ಆರೋಗ್ಯ, ಗೌರವ ಹಾಗೂ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವಂತೆ ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಕರೆ ನೀಡಿದ್ದಾರೆ.



Best platform I have encountered in a long time. The bonuses are generous and the support team is very helpful. Log in to brazino777entrar now
The iOS version is incredibly stable and the graphics are stunning. It is a game changer for mobile players. Try hitclubios yourself.