ಮಂಗಳೂರು: ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಹಿಂಭಾಗದಲ್ಲಿ ರಿಕ್ಷಾ ಚಾಲಕರ ಕಿರಿಕಿರಿ ಮಿತಿ ಮೀರುತ್ತಿದ್ದು, ಪ್ರಯಾಣಿಕರು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ರಿಕ್ಷಾ ಚಾಲಕರ ನಡುವಿನ ಗಲಾಟೆಯಿಂದಾಗಿ ಪ್ರಯಾಣಿಕರಿಗೆ ಮುಜುಗರದ ಪರಿಸ್ಥಿತಿ ಎದುರಾಗಿದೆ.

ಇಂದು ಕೂಡ ರಿಕ್ಷಾ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.


