ಎಸ್‌ಐಆರ್ ವಿವಾದ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬೆಂಬಲಿಸಿ 42 ನಿವೃತ್ತ ನ್ಯಾಯಮೂರ್ತಿಗಳ ಪತ್ರ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿವಾದದ ನಡುವೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬೆಂಬಲಿಸಿ 42 ನಿವೃತ್ತ ನ್ಯಾಯಮೂರ್ತಿಗಳು ಗುರುವಾರ ಬಹಿರಂಗ ಪತ್ರ ಬರೆದಿದ್ದಾರೆ.


ಎಸ್‌ಐಆರ್ ಪ್ರಕ್ರಿಯೆ ಕಾನೂನುಬದ್ಧವಾಗಿದ್ದು, ಭಾರತೀಯ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿರುವ ನಿವೃತ್ತ ನ್ಯಾಯಮೂರ್ತಿಗಳು, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳು ಹಾಗೂ ವಿವಿಧ ಹೈಕೋರ್ಟ್‌ಗಳ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಸಹಿ ಮಾಡಿರುವ ಪತ್ರದಲ್ಲಿ, ತಾವು ಯಾವುದೇ ರಾಜಕೀಯ ಪಕ್ಷದ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಸ್‌ಐಆರ್ ವಿರೋಧಿಸಿ ಪ್ರತಿಪಕ್ಷಗಳು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!