17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ

ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ: 163/2009 ಕಲಂ: 11,13,32, 33,34, 38(a), 43 KE Act ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 17 ವರ್ಷ ಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.


ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿ ವಾರೆಂಟ್ ಜಾರಿಯಾಗಿದ್ದ ಬಂಟ್ವಾಳ ತಲಪಾಡಿ ನಿವಾಸಿ ಹನೀಫ್@ ಕೊಕ್ಕಡ ಹನೀಫ್ (57) ಎಂಬಾತನನ್ನು ದಿನಾಂಕ 09/10/2026 ರಂದು ಮೂಡಬಿದ್ರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣಾ ASI ಬಶೀರ್, Hc ಜಗದೀಶ್, ಸಂತೋಷ್, PC ಗವಿ ಸಿದ್ದಪ್ಪ ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!