ಮಂಗಳೂರು: ದೆಹಲಿಯಲ್ಲಿ ಹೋರಾಟಗಾರರ ಬಂಧನ ಹಾಗೂ ಅಘೋಷಿತ ತುರ್ತು ಪರಿಸ್ಥಿತಿಯ ವಿರುದ್ಧ ‘ಪ್ರಜಾಪ್ರಭುತ್ವ ಉಳಿಸಿ ಆಂದೋಲನ ಸಮಿತಿ’ ವತಿಯಿಂದ ಅಕ್ಟೋಬರ್ 10ರಂದು ಮಂಗಳೂರಿನಲ್ಲಿ ಪ್ರತಿರೋಧ ರ್ಯಾಲಿ ಹಾಗೂ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವಾಗಿರುವ ಸಮಿತಿಯ ನೇತೃತ್ವದಲ್ಲಿ ಶನಿವಾರ ಸಂಜೆ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಬಳಿಯಿಂದ ಕ್ಲಾಕ್ ಟವರ್‌ವರೆಗೆ ರ್ಯಾಲಿ ನಡೆಯಲಿದೆ.
ಪ್ರತಿಭಟನಾ ರ್ಯಾಲಿ ಹಾಗೂ ಸಭೆಯಲ್ಲಿ ಜಿಲ್ಲೆಯ ಎನ್‌ಡಿಎಯೇತರ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸಮಾನ ಮನಸ್ಕ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಸಹ ಸಂಚಾಲಕ ಅನ್ವರ್ ಸಾದತ್ ಎಸ್. ತಿಳಿಸಿದ್ದಾರೆ.

