ಉಳ್ಳಾಲ ಕ್ಷೇತ್ರದಲ್ಲಿ ಕೆರೆಗಳ ಅಭಿವೃದ್ಧಿಗೆ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಚುರುಕು: ವಿವಿಧ ಸ್ಥಳಗಳ ವೀಕ್ಷಣೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ಉಳ್ಳಾಲ ವಿಧಾನಸಭಾ ಕ್ಷೇತ್ರದ ಕುಂಪಲ, ಅಂಬ್ಲಮೊಗರು ಹಾಗೂ ಹರೇಕಳ ಪ್ರದೇಶಗಳಲ್ಲಿನ ವಿವಿಧ ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.


ಪ್ರದೇಶದ ಕೆರೆಗಳ ಅಭಿವೃದ್ಧಿ ಹಾಗೂ ಅವುಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಡಾ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!