
ಮಂಗಳೂರು : ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಕ್ಟೋಬರ್ 12ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಿದ್ದ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅಧಿಕೃತ ಮಾಹಿತಿ ನೀಡಿದ್ದಾರೆ.


