
ಕಾಸರಗೋಡು: ಅಡೂರು ಠಾಣಾ ವ್ಯಾಪ್ತಿಯ ಪಂಜಿಕಲ್ಲಿನಲ್ಲಿ ಬೆಂಕಿ ಸುಟ್ಟ ಗಾಯಗಳಿಂದ ಗೃಹಿಣಿ ಸಿ.ಎಚ್. ಜಯಂತಿ (53) ಸಾವನ್ನಪ್ಪಿದ್ದಾರೆ.ಮನೆಯ ಹಿಂಬದಿಯ ಅಡುಗೆ ಕೋಣೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ತಿಂಗಳ ಹಿಂದೆ ತಾಯಿ ಸಾವನ್ನಪ್ಪಿದ ಬಳಿಕ ಅವರು ಈ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಆದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

