ಎಬಿವಿಪಿ ಗೂಂಡಾಗಿರಿ ಖಂಡಿಸಿದ ಎನ್‌ಎಸ್‌ಯುಐ; ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ದ್ವಂದ್ವ ನಿಲುವಿಗೆ ಟೀಕೆ ……!

ಮಂಗಳೂರು: ನಗರದ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರು ನಡೆಸಿದ ಗಲಾಟೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸುಹಾನ್ ಆಳ್ವಾ, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ಶೆಟ್ಟಿ ಅವರ ನಿಲುವನ್ನು ಪ್ರಶ್ನಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಂಟ್ ಆಗ್ನೆಸ್ ಕಾಲೇಜಿನ ವಿಚಾರದಲ್ಲಿ ಧ್ವನಿ ಎತ್ತಿದ ಶಾಸಕರು, ಕೆನರಾ ಸೇರಿದಂತೆ ಇತರ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದ್ದರೂ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದರು. ವಿದ್ಯಾರ್ಥಿಗಳ ಹಿತಾಸಕ್ತಿಯೇ ಉದ್ದೇಶವಾಗಿದ್ದರೆ ಎಲ್ಲ ಕಾಲೇಜುಗಳ ವಿಚಾರದಲ್ಲೂ ಸಮಾನ ನಿಲುವು ಹೊಂದಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಬೇಕೇ ಹೊರತು, ಎಬಿವಿಪಿ ಗೂಂಡಾಗಿರಿ ನಡೆಸುವುದು ಸರಿಯಲ್ಲ ಎಂದು ಹೇಳಿದರು.

ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭಾವನೆಗಳಿಗೆ ಗೌರವ ನೀಡಿ ಪರೀಕ್ಷೆ ನಡೆಸುವ ಬಗ್ಗೆ ಕಾಲೇಜು ಆಡಳಿತ ಮಂಡಳಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಕಾಲೇಜುಗಳಿಗೂ ಒಂದೇ ಮಾನದಂಡ ಅನ್ವಯಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ವಿದ್ಯಾರ್ಥಿ ಸಂಘಟನೆಯ ಪ್ರಮುಖರಾದ ಯು ಟಿ ಫರೀದ್ ಇಫ್ತಿಕಾರ್, ಸುಕುವಿಂದರ್ ಸಿಂಗ್, ಸಾಹಿಲ್ ಮಂಚಿಲ, ಸಫ್ವನ್ ಕುದ್ರೋಳಿ, ಶಾನ್ ಶಿರಿ, ಪ್ರಜೀತ್ ಕುಳಾಯಿ, ದಾವೂದ್, ಸಂತೋಷ್ ಸುಳ್ಯ, ರಿಹಾನ್ ಅಬೂಬಕ್ಕರ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!