ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ: ಅ.15ರಂದು ಸಮಾಜಮುಖಿ ಸೇವಾ ಕಾರ್ಯಕ್ರಮ

ಮಂಗಳೂರು: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಚೇತರಿಕೆಗಾಗಿ ಶುಭ ಹಾರೈಸುವ ಉದ್ದೇಶದಿಂದ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ, ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರಿಸುವ ಕಾರ್ಯಕ್ರಮ ಅ.15ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಸಭಾಂಗಣದಲ್ಲಿ ನಡೆಯಲಿದೆ.


ಸಹಕಾರ ಕ್ಷೇತ್ರದ ಮೂಲಕ ಆರ್ಥಿಕ ಪ್ರಗತಿ, ಸಾಮಾಜಿಕ ಕಳಕಳಿ ಹಾಗೂ ಜನಸೇವೆಗೆ ಮಹತ್ವದ ಕೊಡುಗೆ ನೀಡಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುವುದರೊಂದಿಗೆ ಸಮಾಜದ ದುರ್ಬಲ ವರ್ಗದವರಿಗೆ ನೆರವು ಒದಗಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಶಕ್ತರಿಗೆ ನೆರವು ವಿತರಿಸುವುದರ ಜೊತೆಗೆ ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ಆಶಯದೊಂದಿಗೆ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಎಂ. ಮೋಹನ್ ಆಳ್ವ ಹಾಗೂ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

SHARE
Loading spinner

One thought on “ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ: ಅ.15ರಂದು ಸಮಾಜಮುಖಿ ಸೇವಾ ಕಾರ್ಯಕ್ರಮ”

Leave a Reply

Your email address will not be published. Required fields are marked *

error: Content is protected !!