
ಬದಿಯಡ್ಕ : ಬದಿಯಡ್ಕ ಠಾಣಾ ವ್ಯಾಪ್ತಿಯ ನೆಕ್ರಾಜೆ ಕಣಿಯಾಮೂಲೆಯ ಕೃಷಿಕ ದಂಪತಿ ಜಯರಾಮ ಹಾಗೂ ಬಿಂದು ಅವರ 17 ವರ್ಷದ ಮಗಳು ಧನುಷಾ ದುರಂತ ಅಂತ್ಯ ಕಂಡಿದ್ದಾಳೆ.
ಮುಳ್ಳೇರಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಟು ಪದವಿಪೂರ್ವ ವ್ಯಾಸಂಗ ಮಾಡುತ್ತಿದ್ದ ಈಕೆ ಶೈಕ್ಷಣಿಕವಾಗಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು.

ಮಂಗಳವಾರ ಸಂಜೆ ಹೆತ್ತವರು ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನುಷಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

ಈ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


