ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಅ.15) ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಜೆ 4ರಿಂದ ರಾತ್ರಿ 8ರವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕೆಪಿಟಿ ವೃತ್ತದಿಂದ ಕೆಎಸ್ಆರ್ಟಿಸಿ, ಲಾಲ್ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ ಹಾಗೂ ನಾರಾಯಣಗುರು ವೃತ್ತದಿಂದ ಮಣ್ಣಗುಡ್ಡೆ, ದುರ್ಗಾಮಹಲ್ ಜಂಕ್ಷನ್, ಕುದ್ರೋಳಿ ದೇವಸ್ಥಾನ, ಅಳಕೆ ಸೇತುವೆ ಮತ್ತು ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಂಚರಿಸುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.
ಇಂದು ಸಂಜೆ 4ರಿಂದ ರಾತ್ರಿ 8ರವರೆಗೆ ನ್ಯೂ ಚಿತ್ರಾ ಜಂಕ್ಷನ್ನಿಂದ ದುರ್ಗಾಮಹಲ್ ಜಂಕ್ಷನ್ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್ನಿಂದ ನ್ಯೂ ಚಿತ್ರಾ ಜಂಕ್ಷನ್ವರೆಗೆ ವಾಹನ ಸಂಚಾರ ಮಾಡದೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚಿಸಿದ್ದಾರೆ.

ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ. ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮಣ್ಣಗುಡ್ಡೆ ಮತ್ತು ಗಾಂಧಿನಗರದ ಅಡ್ಡರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.


Super impressed with the customer support team, they answered my questions in minutes. The gameplay is fair and rewarding. okadaplaycasino is legit!