ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದ ಮಾನ್ಯ ನ್ಯಾಯಾಲಯ

ದಿನಾಂಕ:08.05.2021 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ, ಅ. ಕ್ರ : 40/2021, ಕಲಂ : 376 (2)(F)(N), 376(3), 506 IPC ಮತ್ತು ಕಲಂ : 5(J) (ii) (L) POCSO ACT-12 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಆಗಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ಯು. ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿತ ಕಡಬ ರಾಮಕುಂಜ ನಿವಾಸಿ ಶೇಖರ್ @ ಸೇಸಪ್ಪ (30) ಎಂಬಾತನ ವಿರುದ್ದ ಮಾನ್ಯ ನ್ಯಾಯೈಆಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ. ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು ಇಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಧೀಶರಾದ ಸುಮಂಗಲಾ ಚಕಲಬ್ಬಿರವರು, ಆರೋಪಿತನ ವಿರುದ್ದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ. ಪೋಕ್ಸೊ (POCSO) ಕಾಯ್ದೆ 2012ರ ಕಲಂ 5(l) r/w 6 ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 1 ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ.

. ಭಾರತೀಯ ದಂಡ ಸಂಹಿತೆ ಕಲಂ 506 (ಜೀವ ಬೆದರಿಕೆ) ಅಡಿಯಲ್ಲಿ ಆರೋಪಿಗೆ 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷದ ಸಾಧಾರಣ ಶಿಕ್ಷೆ ವಿಧಿಸಿ ಆದೇಶಿಸಿದ್ದು, ಒಟ್ಟು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ 50,000 ದಂಡ ಘೋಷಣೆಯಾಗಿರುತ್ತದೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಆಡ್ಯoತ್ತಾಯ ರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.

SHARE
Loading spinner

One thought on “ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದ ಮಾನ್ಯ ನ್ಯಾಯಾಲಯ”

Leave a Reply

Your email address will not be published. Required fields are marked *

error: Content is protected !!