ಕಾಸರಗೋಡು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಮುನ್ನೆಚ್ಚರಿಕೆ

ಕಾಸರಗೋಡು /ತಿರುವನಂತಪುರಂ: ಕೇಂದ್ರ ಹವಾಮಾನ ಇಲಾಖೆಯು ಕೇರಳ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಿದೆ.ಇಂದು ಶುಕ್ರವಾರ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

​ನಾಳೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ ಮಲಪ್ಪುರಂ, ಕೋಝಿಕ್ಕೋಡ್, ವಯನಾಡು ಹಾಗೂ ಸೋಮವಾರ ಪತ್ತನಂತಿಟ್ಟ, ಇಡುಕ್ಕಿ, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

​ಲಕ್ಷದ್ವೀಪ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳ ಮೇಲಿರುವ ಚಂಡಮಾರುತದ ಸುಳಿಗಾಳಿಯು ಈ ಮಳೆಗೆ ಮುಖ್ಯ ಕಾರಣವಾಗಿದೆ.ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

SHARE
Loading spinner

One thought on “ಕಾಸರಗೋಡು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಮುನ್ನೆಚ್ಚರಿಕೆ”

Leave a Reply

Your email address will not be published. Required fields are marked *

error: Content is protected !!