ಸಾನಿಧ್ಯದಲ್ಲಿ ಶ್ರದ್ಧಾಭಕ್ತಿಯಿಂದ ಆಯುಧ ಪೂಜೆ

ನವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಾನಿಧ್ಯದಲ್ಲಿ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ವಾಹನಗಳು, ಟ್ರಸ್ಟಿಗಳ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಯ ವಾಹನಗಳು ಮತ್ತು ವೃತ್ತಿಪರ ತರಬೇತಿ ಕೇಂದ್ರದಲ್ಲಿ ಬಳಸುವ ವಿವಿಧ ಸಾಧನ-ಸಲಕರಣೆಗಳಿಗೆ ಪೂಜೆ ಸಲ್ಲಿಸಲಾಯಿತು.

ಶ್ರೀ ಗಣೇಶ ಸೇವಾ ಟ್ರಸ್ಟ್‌ನ ಟ್ರಸ್ಟಿಗಳು, ಸಾನಿಧ್ಯದ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿಶೇಷ ಮಕ್ಕಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲರೂ ಒಟ್ಟಾಗಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಭಕ್ತಿಭಾವದಿಂದ ಆಯುಧ ಪೂಜೆಯನ್ನು ಆಚರಿಸಿದರು.

SHARE
Loading spinner

One thought on “ಸಾನಿಧ್ಯದಲ್ಲಿ ಶ್ರದ್ಧಾಭಕ್ತಿಯಿಂದ ಆಯುಧ ಪೂಜೆ”

Leave a Reply

Your email address will not be published. Required fields are marked *

error: Content is protected !!