ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ರಾಜೇಂದ್ರ ಕುಮಾರ್ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಶಾಸಕರು, ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ರಾಜೇಂದ್ರ ಕುಮಾರ್ ಅವರು ಮತ್ತೆ ಸಂಪೂರ್ಣ ಚೇತರಿಸಿಕೊಂಡು ಉತ್ತಮ ಆರೋಗ್ಯದೊಂದಿಗೆ ಎಂದಿನಂತೆ ಸಾರ್ವಜನಿಕ ಹಾಗೂ ಸಹಕಾರಿ ಕ್ಷೇತ್ರದ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.
