ಮಂಗಳೂರು: ಪ್ರವಾಸೋದ್ಯಮ ಉತ್ತೇಜನ ಹಾಗೂ ಪರಿಸರ, ಪ್ರಕೃತಿ ಮತ್ತು ಜಲಚರ ಸಂಪನ್ಮೂಲಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅ. 25ರಂದು ಬೆಳಿಗ್ಗೆ 9.30ರಿಂದ ಪಿಲಿಕುಳದ ಲೇಕ್ ಗಾರ್ಡನ್‌ನಲ್ಲಿ ಮತ್ಸ್ಯ ಮೇಳ ಆಯೋಜಿಸಲಾಗಿದೆ.

ಮೇಳದ ಅಂಗವಾಗಿ ಕೆರೆಯಲ್ಲಿರುವ ಮೀನುಗಳನ್ನು ಹಿಡಿಯುವ ಕಾರ್ಯಕ್ರಮ, ಮೀನು ಮರಿಗಳನ್ನು ಕೆರೆಗೆ ಬಿಡುವ ಕಾರ್ಯಕ್ರಮ ಹಾಗೂ ವಿಶೇಷ ಮೀನಿನ ಖಾದ್ಯಗಳ ಆಹಾರ ಮೇಳ ನಡೆಯಲಿದೆ. ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಆಸಕ್ತ ಹೋಟೆಲ್ ಉದ್ಯಮಿಗಳು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಹಾಗೂ ಮಳಿಗೆ ನೋಂದಣಿಗಾಗಿ ಅ. 22ರೊಳಗೆ 0824-2263565 ಸಂಖ್ಯೆಯನ್ನು ಸಂಪರ್ಕಿಸುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

