
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿ ಅ. 21ರಂದು ಬೆಳಿಗ್ಗೆ 10.30ಕ್ಕೆ ನಗರದ ತುಳುಭವನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ. ಗೋಪಾಲಾಚಾರ್ ಜಯಂತಿ ಸಂದೇಶ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


