​ಸ್ತನ ಕ್ಯಾನ್ಸರ್ ಜಾಗೃತಿ ಸಭೆ: ಅಕ್ಟೋಬರ್ 24ರಂದು ಕುಂಜತ್ತೂರಿನಲ್ಲಿ

ಮಂಜೇಶ್ವರ: ಮಹಿಳೆಯರಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಹಾಗೂ ಆರಂಭಿಕ ಹಂತದಲ್ಲೇ ರೋಗ ಪತ್ತೆಯ ಮಹತ್ವವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಅಕ್ಟೋಬರ್ 24, ಶನಿವಾರದಂದು ಸಂಜೆ 4:00 ರಿಂದ 6:00 ಗಂಟೆಯವರೆಗೆ ಕುಂಜತ್ತೂರು ಅಯಾಶ್ ಕ್ಲಿನಿಕ್ ಆವರಣದಲ್ಲಿ ಮಹಿಳೆಯರಿಗಾಗಿ ಮಾತ್ರ ವಿಶೇಷ ‘ಸ್ತನ ಕ್ಯಾನ್ಸರ್ ಜಾಗೃತಿ ಶಿಬಿರ ಆಯೋಜಿಸಿರುವುದಾಗಿ ಸಂಬಂಧಪಟ್ಟವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಈ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯೆ ಡಾ. ಸುಝೀನಾ ಸಯ್ಯದ್ ಅವರು ಉಪಸ್ಥಿತರಿದ್ದು, ಸ್ತನ ಕ್ಯಾನ್ಸರ್ ಜಾಗೃತಿ ಉಪನ್ಯಾಸ ನಡೆಸಿಕೊಡಲಿದ್ದಾರೆ.

​ಸ್ತನ ಕ್ಯಾನ್ಸರ್ ಕುರಿತಾದ ಸಂಪೂರ್ಣ ವಿವರಣೆ, ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮಹಿಳೆಯರು ಸ್ವಯಂ ಪರೀಕ್ಷೆ ಮಾಡಿಕೊಳ್ಳುವ ವಿಧಾನಗಳ ಕುರಿತು ಡಾ. ಸುಝೀನಾ ಸಯ್ಯದ್ ಅವರು ಸರಳ ಹಾಗೂ ವಿವರವಾದ ಮಾಹಿತಿ ನೀಡಲಿದ್ದಾರೆ.

​ಮಹಿಳೆಯರನ್ನು ಕಾಡುವ ಗಂಭೀರ ಆರೋಗ್ಯ ಸಮಸ್ಯೆಗಳಲ್ಲಿ ಸ್ತನ ಕ್ಯಾನ್ಸರ್ ಪ್ರಮುಖವಾದದ್ದು. ಆದರೆ, ಆರಂಭಿಕ ಹಂತದಲ್ಲೇ ಇದನ್ನು ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ. ಪ್ರತಿಯೊಬ್ಬ ಮಹಿಳೆಯೂ ಇದರ ಲಕ್ಷಣಗಳ ಬಗ್ಗೆ ಅರಿವು ಹೊಂದಿರುವುದು ಅತ್ಯಗತ್ಯ.

ಮಹಿಳೆಯರು ಯಾವುದೇ ಹಿಂಜರಿಕೆಯಿಲ್ಲದೆ ಮುಕ್ತವಾಗಿ ಭಾಗವಹಿಸಿ, ತಮ್ಮ ಆರೋಗ್ಯ ಸಂಬಂಧಿತ ಪ್ರಶ್ನೆ ಹಾಗೂ ಸಂಶಯಗಳನ್ನು ವೈದ್ಯರೊಂದಿಗೆ ಹಂಚಿಕೊಳ್ಳುವಂತಾಗಲು ಮಹಿಳೆಯರಿಗಾಗಿ ಪ್ರತ್ಯೇಕ ಹಾಗೂ ಸುಸಜ್ಜಿತ ವ್ಯವಸ್ಥೆಯನ್ನು ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!