ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ವತಿಯಿಂದ ಡಿಸೆಂಬರ್ 20ರಂದು ನಡೆಯಲಿರುವ ವೈದ್ಯರು, ಇಂಜಿನಿಯರ್ಗಳು, ವಕೀಲರು ಹಾಗೂ ಚಾರ್ಟರ್ಡ್ ಅಕೌಂಟೆಂಟ್ಗಳ ಸಮಾವೇಶದ ಪೂರ್ವಭಾವಿ ಸಭೆ ನವೆಂಬರ್ 1ರಂದು ಸಂಜೆ 4.30ಕ್ಕೆ ಕುಂದಾಪುರದ ರಾಮಮಂದಿರದ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಕುಂದಾಪುರ, ಕೋಡಿ, ಉಪ್ಪಿನಕುದ್ರು, ಕೋಟೇಶ್ವರ ಸೇರಿದಂತೆ ವಿವಿಧ ಕ್ಷೇತ್ರ ಸಮಿತಿಗಳ ಸಮಾಜ ಬಾಂಧವರು ಸಭೆಯಲ್ಲಿ ಭಾಗವಹಿಸುವಂತೆ ರಾಮಕ್ಷತ್ರಿಯ ವೃತ್ತಿಪರರ ಸಮಾವೇಶ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.


