ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪೊಲೀಸ್ ಸಂಸ್ಮರಣಾ ದಿನಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸಶಸ್ತ್ರ ಮೀಸಲುಪಡೆ ಮುಖ್ಯ ಕಚೇರಿಯ ಮೈದಾನದಲ್ಲಿ ದೇಶದ ಭದ್ರತೆ, ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಬುಧವಾರ ಗೌರವ ನಮನ ಸಲ್ಲಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ ಖರ್ಗೆ, ಕಂದಾಯ ಇಲಾಖೆಯ ಹಾಗೂ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಇನ್ನಿತರರು
ಉಪಸ್ಥಿತರಿದ್ದರು.
