ಮಂಜೇಶ್ವರ ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಮನವಿ

ಮಂಜೇಶ್ವರ: ಪಾಲಕ್ಕಾಡ್ ರೈಲ್ವೆ ವಿಭಾಗದ ಕೊನೆಯ ನಿಲ್ದಾಣವಾಗಿರುವ ಮಂಜೇಶ್ವರ ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ರೈಲ್ವೆ ವಿಭಾಗದ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಲಾಯಿತು.

ಮನವಿಯ ಹಿನ್ನೆಲೆಯಲ್ಲಿ ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಪರಿಶೀಲನೆಗಾಗಿ ಆಗಮಿಸಿದ ಅಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗ, ನಿಲ್ದಾಣದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಲಾಯಿತು .

ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ವಿವಿಧ ರೈಲುಗಳ ನಿಲುಗಡೆ ಕಲ್ಪಿಸುವುದು, ಹೆದ್ದಾರಿ ಬದಿಯಲ್ಲಿರುವ ರೈಲ್ವೆ ಜಮೀನಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ನೂತನ ರೈಲ್ವೆ ಪ್ಲಾಟ್‌ಫಾರ್ಮ್ ಸ್ಥಾಪನೆ, ವಿಶ್ರಾಂತಿ ಕೊಠಡಿ ನಿರ್ಮಾಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ರೈಲ್ವೆ ಹಳಿಗಳನ್ನು ದಾಟಲು ಫುಟ್ ಓವರ್‌ಬ್ರಿಡ್ಜ್ ನಿರ್ಮಾಣ ಹಾಗೂ ರೈಲ್ವೆ ಟರ್ಮಿನಲ್ ಸ್ಥಾಪನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಮುಂದಿಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ಚಂದ್ರ ಎಂ., ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಮಂಜೇಶ್ವರ ರೈಲ್ವೆ ಹೋರಾಟ ಸಮಿತಿಯ ನೇತಾರರಾದ ಎಸಿಪಿ ಬಶೀರ್, ಎಂ.ಕೆ. ಮಜೀದ್ ಹಾಗೂ ತುಳಸಿದಾಸ್ ಎಂ. ಉಪಸ್ಥಿತರಿದ್ದರು.

ಇದೇ ವೇಳೆ ಮಂಜೇಶ್ವರ ರೈಲ್ವೆ ನಿಲ್ದಾಣದ ಸ್ವಚ್ಛತೆ ಹಾಗೂ ಸಂಬಂಧಿತ ಸಮಸ್ಯೆಗಳ ಕುರಿತು ಮಂಜೇಶ್ವರ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಮತ್ತು ಸೈಫುಲ್ಲ ಅವರೊಂದಿಗೆ ಚರ್ಚೆ ನಡೆಸಲಾಯಿತು. ನಿಲ್ದಾಣದ ಸ್ವಚ್ಛತೆ ಕಾಪಾಡುವುದರ ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ, ಮಂಜೇಶ್ವರ ರೈಲ್ವೆ ನಿಲ್ದಾಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!