ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ: ಸುಮಾರು ಐದು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 139/2007ರ ಐಪಿಸಿ ಕಲಂ 366, 368, 420, 120 ಹಾಗೂ 149ರ ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಎಂಬಾತನನ್ನು ಬಂಧಿಸಲಾಗಿದೆ.

ದಿನಾಂಕ 21-10-2026ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನ ಪಾಸ್‌ಪೋರ್ಟ್‌ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!