ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ

ಕಾಸರಗೋಡು : ​ಕೇರಳದಲ್ಲಿ ತುಲಾವರ್ಷದ ಅಬ್ಬರ ಮುಂದುವರಿದಿದ್ದು, ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ಇಂದು ತೀವ್ರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆ ಸೇರಿದಂತೆ ವಿವಿಧೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

​ದಕ್ಷಿಣ ತಮಿಳುನಾಡು ತೀರದ ಹತ್ತಿರ ವಾಯುಭಾರ ಕುಸಿತ ಉಂಟಾಗಿರುವುದು ಮತ್ತು ಬಂಗಾಳಕೊಲ್ಲಿಯ ಚಕ್ರವಾತ ಸುಳಿಯು ವಾಯುಭಾರ ಕುಸಿತವಾಗಿ ಶಕ್ತಿ ಪಡೆಯುತ್ತಿರುವುದರಿಂದ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹವಾಮಾನ ವೈಪರೀತ್ಯದ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!