ಮೂಡುಂಬೈಲಿನಲ್ಲಿ ಅ.25ರಂದು ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ

ಮಂಜೇಶ್ವರ: ಗೆಳೆಯರ ಬಳಗ (ರಿ.)ಬಲ್ಲಂಗುಡೇಲು ಇದರ ಆಶ್ರಯದಲ್ಲಿ, ಕೆ. ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಹಾಗೂ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 25, 2026ರ ಭಾನುವಾರದಂದು ಮೂಡುಂಬೈಲಿನ ಸರಕಾರಿ ಪ್ರೌಢಶಾಲೆಯಲ್ಲಿ ಈ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆಯ ಜೊತೆಗೆ ರಕ್ತದಾನ ಶಿಬಿರವೂ ನಡೆಯಲಿದ್ದು, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಅಗತ್ಯವಿರುವವರಿಗೆ ನೆರವಾಗುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಜನರಿಗೆ ಆರೋಗ್ಯ ಸೇವೆ ತಲುಪಿಸುವ ನಿಟ್ಟಿನಲ್ಲಿ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ನಿರೀಕ್ಷಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಜೇಶ್ವರ ಮಾನ್ಯ ಶಾಸಕರು AKM ಅಶ್ರಫ್ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!