
ಉಪ್ಪಳ : ಇಲ್ಲಿಯ ಉಪ್ಪಳ ಗೇಟ್ ಅಂಚಿಕಟ್ಟೆಯಲ್ಲಿ ಮಂಗಳೂರು ಮಾರ್ಗದ ರೈಲು ಹಳಿ ಸಮೀಪದ ಪೊದೆಗಳಲ್ಲಿ ಸುಮಾರು 55ರಿಂದ 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರೈಲು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಕೂಡಲೇ ಅವರನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗಮಧ್ಯೆ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದ್ದು, ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತರ ವಿವರಗಳು ಲಭ್ಯವಾಗಿಲ್ಲ.



Pls photo