ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ: ಬೆಂಕಿ ಅವಘಡ

ಉಡುಪಿ: ನಗರದ ಕಿನ್ನಿಮೂಲ್ಕಿ ಡೆಲಿಮಾ ಲೇಔಟ್‌ನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಮನೆಯೊಂದರಲ್ಲಿ ವಿಶೇಷ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ, ಹೆಚ್ಚುವರಿಯಾಗಿ ತಂದು ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನಲ್ಲಿ ಸೋರಿಕೆ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.


ಈ ವೇಳೆ ಅಡುಗೆ ಕೆಲಸದಲ್ಲಿ ತೊಡಗಿದ್ದ ವ್ಯಕ್ತಿಗೆ ಬೆಂಕಿ ತಗುಲಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!