ಸುರತ್ಕಲ್‌ನಲ್ಲಿ ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು /ಸುರತ್ಕಲ್: ಕುಳಾಯಿಯ ರಾಯನ್ ಇಂಟರ್ ನ್ಯಾಷನಲ್ ಸ್ಕೂಲ್ ಬಸ್‌ಗೆ ಟೂರಿಸ್ಟ್ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದು ಪರಿಣಾಮ 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ನನ್ ಹಾಲ್ ಎದುರು ನಡೆದಿದೆ.

ಘಟನೆಯ ವೇಳೆ ಕುಳಾಯಿಯ ರಾಯನ್ ಇಂಟರ್ ನ್ಯಾಷನಲ್ ಸ್ಕೂಲ್ ಬಸ್‌ನಲ್ಲಿ 16 ಮಕ್ಕಳಿದ್ದು, ಈ ಪೈಕಿ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕುಳಾಯಿಯ ರಾಯನ್ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ನನ್ ಹಾಲ್‌ ಎದುರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಮಕ್ಕಳನ್ನು ಇಳಿಸುತ್ತಿತ್ತು. ಈ ವೇಳೆ ಅತೀವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿಕೊಂಡು ಬಂದ ಖಾಸಗಿ ಟೂರಿಸ್ಟ್ ಬಸ್ ಶಾಲಾ ಬಸ್ ನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಈ ವೇಳೆ 16 ಮಕ್ಕಳಿದ್ದ ಶಾಲಾ ಬಸ್ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದಿದ್ದು, ಬಸ್ ನಲ್ಲಿದ್ದ 13 ಮಕ್ಕಳಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಮಕ್ಕಳನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ನಡೆಸಿದ ಬಸ್ಸನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!