ರಾಮಕ್ಷತ್ರಿಯ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆ ನಾಳೆ

ಮಂಗಳೂರು: ರಾಮಕ್ಷತ್ರಿಯ ವೃತ್ತಿಪರರ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸುವ ಉದ್ದೇಶದಿಂದ ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ಇದರ ವತಿಯಿಂದ ನಾಳೆ (ಅ.25) ಬೆಳಗ್ಗೆ 10.30ಕ್ಕೆ ಜಪ್ಪುವಿನ ರಾಮಕ್ಷತ್ರಿಯ ಸೇವಾ ಸಂಘದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ಮಂಗಳೂರಿನಲ್ಲಿರುವ ರಾಮಕ್ಷತ್ರಿಯ ಸಮುದಾಯದ ವೈದ್ಯರು, ಎಂಜಿನಿಯರ್‌ಗಳು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಮಾವೇಶದ ಯಶಸ್ವಿ ಆಯೋಜನೆಗೆ ಸಲಹೆ ಹಾಗೂ ಸಹಕಾರ ನೀಡುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!