

ಮಂಜೇಶ್ವರ : ಕನಿಯಾಲ ಚಿಮಿಣಿತ್ತಡ್ಕದ ಕೂಲಿ ಕಾರ್ಮಿಕ ಲೋಕೇಶ್ ಅವರ ಪತ್ನಿ ಮಮತಾ (37) ಅವರು ಹಳದಿ ಕಾಮಲೆಯಿಂದ ಸಾವನ್ನಪ್ಪಿದ್ದಾರೆ.

ಕಳೆದ 15 ದಿನಗಳ ಹಿಂದೆ ಅಸೌಖ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹಳದಿ ಕಾಮಲೆ ಇರುವುದು ಪತ್ತೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಲಕ್ಕೇರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


