ಬೇಕಲ ಸೇತುವೆ ಬಳಿ ಖಾಸಗಿ ಬಸ್ ಪಲ್ಟಿ: 19 ಪ್ರಯಾಣಿಕರಿಗೆ ಗಾಯ

​ಕಾಸರಗೋಡು : ಬೇಕಲ ಸೇತುವೆಯ ಬಳಿ ಗೋವಾದಿಂದ ಕೊಚ್ಚಿಗೆ ತೆರಳುತ್ತಿದ್ದ ಖಾಸಗಿ ರಾತ್ರಿ ಕಾಲ ಸೇವಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಭಾನುವಾರ ಮುಂಜಾನೆ 2 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರಲ್ಲಿ 19 ಮಂದಿಯನ್ನು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

​ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಿ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
ಶಬ್ದ ಕೇಳಿ ಧಾವಿಸಿ ಬಂದ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯ ನಡೆಸಿದರು. ನಂತರ ಕ್ರೇನ್ ಸಹಾಯದಿಂದ ಬಸ್ಸನ್ನು ಮೇಲಕ್ಕೆತ್ತಲಾಗಿದ್ದು, ಬೆಳಿಗ್ಗೆ 10 ಗಂಟೆಯ ವೇಳೆಗೆ ಮತ್ತೊಂದು ಬಸ್ ವ್ಯವಸ್ಥೆ ಮಾಡಿ ಇತರೆ ಪ್ರಯಾಣಿಕರನ್ನು ಎರ್ನಾಕುಳಂಗೆ ಕಳುಹಿಸಿಕೊಡಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!