
ಕಾಸರಗೋಡು : ದೌರ್ಜನ್ಯಕ್ಕೊಳಗಾದ 17 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ವಿಚಾರ ವೈದ್ಯಕೀಯ ತಪಾಸಣೆಯಿಂದ ದಢಪಟ್ಟಿದೆ. ಈ ವಿಷಯ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ 23 ವರ್ಷದ ಯುವಕನೇ ಈ ಕೃತ್ಯವೆಳೆಗಿನ ಆರೋಪಿಯಾಗಿದ್ದಾನೆ. ಸಂತ್ರಸ್ತ ಬಾಲಕಿಗೆ ಇದ್ದ ಕೆಲವು ಶಾರೀರಿಕ ಅಡಚಣೆಗಳು ಹಾಗೂ ಅನಾರೋಗ್ಯದ ಸಮಸ್ಯೆಗಳ ಕಾರಣದಿಂದ ಆಕೆಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿತ್ತು.

ಅಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯರಿಂದ ಖಚಿತಗೊಂಡಿದೆ.

ಘಟನೆಯ ಬಳಿಕ ಸಂತ್ರಸ್ತೆಯ ಕುಟುಂಬದವರು ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿ ಯುವಕನಿಗಾಗಿ ಬಲೆ ಬೀಸಿ ಹುಡುಕಾಟವನ್ನು ಮುಂದುವರಿಸಿದ್ದಾರೆ.

