ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಕೆರೆಯೊಂದರಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಶಾಲಾ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟವರು ಮಲ್ಲಿಕಟ್ಟೆ ಹೆದ್ದಾರಿ ಪಕ್ಕದ ಜೋಪಡಿ ನಿವಾಸಿಗಳೆಂದು ತಿಳಿದುಬಂದಿದ್ದು, ಮೂಲತ ಹಾವೇರಿ ಜಿಲ್ಲೆಯವರಾಗಿದ್ದಾರೆ. ಮೃತಪಟ್ಟವರನ್ನು ಸಮೀಪದ ಸರಕಾರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ವೈಶಾಲಿ ಹಾಗೂ ಸುನಿತಾ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ತಲುಪಲು ಆಂಬುಲೆನ್ಸ್ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡಗಳು ಹರಸಾಹಸ ಪಡಬೇಕಾಯಿತು. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್, ಕುಂದಾಪುರ ಅಗ್ನಿಶಾಮಕ ದಳ, ಗಂಗೊಳ್ಳಿ ದಿನೇಶ್ ಖಾರ್ವಿ ತಂಡ ಹಾಗೂ ಟೀಮ್ ಹೆಚ್ ಐ ತುರ್ತುಸ್ಬಂದನ ತಂಡಗಳು ತೆರಳಿ ಕಾರ್ಯಾಚರಣೆ ನಡೆಸಿದವು. ಸ್ಥಳೀಯರು ಸಾತ್ ನೀಡಿದರು.
ದಿನೇಶ್ ಕರಿಯ ಅವರು ಬಾಲಕಿಯರಿಬ್ಬರ ಮೃತದೇಹವನ್ನು ಹೊರ ತೆಗೆದರು. ಸದ್ಯ. ಶವಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕಕ್ಕೆ ರವಾನಿಸಲಾಗಿದೆ.

