ಇರಾ ನೇಮು ಪೂಜಾರಿ ಅವರಿಗೆ ಕನ್ನಡ ಭವನದ ಕನ್ನಡ ರಾಜ್ಯೋತ್ಸವ ಗೌರವ ಪ್ರಶಸ್ತಿ

ಕಾಸರಗೋಡು: ಸಾಹಿತ್ಯ ಸಂಘಟಕ, ಸಮಾಜಸೇವಕ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ, ನಿವೃತ್ತ ಪ್ರಾಧ್ಯಾಪಕ ಇರಾ ನೇಮು ಪೂಜಾರಿ ಅವರಿಗೆ 2026ನೇ ಸಾಲಿನ ಕನ್ನಡ ಭವನದ ‘ಕನ್ನಡ ರಾಜ್ಯೋತ್ಸವ ಗೌರವ ಪ್ರಶಸ್ತಿ’ ಲಭಿಸಿದೆ.

ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಅವರ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ’ದ ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.

ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆಗಳ ಇಲಾಖೆಯ ಕನ್ನಡ ಸಂಘದ ಸಹಭಾಗಿತ್ವದಲ್ಲಿ ಈ ಬಾರಿಯ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕನ್ನಡ ಭವನದ 10 ಮಂದಿ ಪದಾಧಿಕಾರಿಗಳಿಗೆ ಕನ್ನಡ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸನ್ಮಾನ ನೀಡಿ ಗೌರವಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಕನ್ನಡ ಭವನದ ವತಿಯಿಂದಲೂ 10 ಮಂದಿಗೆ ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ ಪ್ರದಾನ ಮಾಡಲಾಗುತ್ತದೆ.

ಕನ್ನಡ ಭವನವು ಪ್ರತಿವರ್ಷ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಇರಾ ನೇಮು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 1ರಂದು ಕಾಸರಗೋಡಿನ ಕನ್ನಡ ಭವನದ ‘ಕನ್ನಡ ಭುವನೇಶ್ವರಿ ವೇದಿಕೆ’ಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!