ಕ್ಯಾಂಪಸ್‌ಗಳಿಂದ ಉದ್ಯಮಶೀಲತೆಯತ್ತ: STEP UP ಯೋಜನೆಗೆ ಚಾಲನೆಕಾಸರಗೋಡು ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್

ಕಾಲೇಜು ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಮನೋಭಾವ ಬೆಳೆಸುವ ಹಾಗೂ ಅವರ ನವೀನ ಆಲೋಚನೆಗಳನ್ನು ಯಶಸ್ವಿ ಉದ್ಯಮಗಳಾಗಿ ರೂಪಿಸಲು ಅಗತ್ಯವಾದ ಜ್ಞಾನ ಮತ್ತು ಬೆಂಬಲ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತದ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಾರಿಗೊಳಿಸಲಾಗುತ್ತಿರುವ STEP UP ಯೋಜನೆಗೆ ಚಾಲನೆ ನೀಡಲಾಯಿತು.

ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್, ಐಎಎಸ್, ಅವರು ಯೋಜನೆಯನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ವಿವಿಧ ಅವಕಾಶಗಳು ಹಾಗೂ ಸರ್ಕಾರದಿಂದ ದೊರೆಯುವ ನೆರವು ಮತ್ತು ಪ್ರೋತ್ಸಾಹಕ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ವಿದ್ಯಾರ್ಥಿಗಳ ಸಂಪೂರ್ಣ ಸಹಕಾರ ಅಗತ್ಯವಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರದ ವಿವಿಧ ಉದ್ಯಮ ಪ್ರೋತ್ಸಾಹಕ ಯೋಜನೆಗಳು ಹಾಗೂ ನವೋದ್ಯಮ ಆರಂಭಿಸಲು ಲಭ್ಯವಿರುವ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!