ಮಂಗಳೂರು MRPL ಹಾಗೂ MSEZ ಸಂಸ್ಥೆಗಳಿಂದ ಉಂಟಾಗುತ್ತಿರುವ ನಾನಾ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ “ಎಂ. ಆರ್. ಪಿ.ಎಲ್ – ಎಂ.ಎಸ್. ಇ. ಝಡ್ ಗುತ್ತಿಗೆ ಕಾರ್ಮಿಕರ ಹಾಗೂ ಸಂತ್ರಸ್ತರ ಹೋರಾಟ ಸಮಿತಿ “ವತಿಯಿಂದ ಮುಲ್ಕಿ ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ಇವರಿಗೆ ಮನವಿಯನ್ನು ಹೋರಾಟ ಸಮಿತಿಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಸಲ್ಲಿಸಲಾಯಿತು.





ಸಮಿತಿಯ ಬೇಡಿಕೆಗಳಿಗೆ ಬರುವ ಅಕ್ಟೋಬರ್ 31 ,2026 ರ ಒಳಗಾಗಿ ಜಿಲ್ಲಾಡಳಿತ ಹಾಗೂ ಸಂಸ್ಥೆಯು ಸೂಕ್ತ ಸ್ಪಂದನೆ ನೀಡದೆ ಇದ್ದಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಹೋರಾಟ ಸಮಿತಿ ಎಚ್ಚರಿಸಿದೆ.

