ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸುತ್ತಮುತ್ತಲಿನ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ: ಅಧಿಕಾರಿಗಳಿಗೆ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಸೂಚನೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದ ಬಳಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಸಾರ್ವಜನಿಕರ ಅನುಕೂಲತೆ ಹಾಗೂ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಮುಡಾ ಆಯುಕ್ತರಾದ ಶ್ರೀ ಮೊಹಮ್ಮದ್ ನಜೀರ್ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ದಿಲ್ ರಾಜ್ ಅಲ್ವಾ, ಶ್ರೀ ರಾಜೇಂದ್ರ ಚಿಲಿಂಬಿ ಶ್ರೀ ಉಷಾ ಪ್ರಭಾಕರ್, ಶ್ರೀ ಕಿರಣ್ ಕುಮಾರ್, ಶ್ರೀ ಪ್ರೀತಾ ನಂದನ್, ಉಪಸ್ಥಿತರಿದ್ದರು..

SHARE
Loading spinner

Leave a Reply

Your email address will not be published. Required fields are marked *

error: Content is protected !!