ಕಾಸರಗೋಡಿನ ಕನ್ನಡ ಭವನದಲ್ಲಿ ನಾಳೆ 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕಾಸರಗೋಡು: ಕನ್ನಡ ಸಂಘ, ವಾಣಿಜ್ಯ ತೆರಿಗೆಗಳ ಇಲಾಖೆ ಬೆಂಗಳೂರು ಹಾಗೂ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಸಹಯೋಗದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ನಾಳೆ (ನ.1) ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಕನ್ನಡ ಭವನದ ಸಭಾಂಗಣದಲ್ಲಿ ನಡೆಯಲಿದೆ.

ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ (ಕೇಂದ್ರ ಕಚೇರಿ-1) ಎಂ.ಪಿ. ರವಿಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ್‌ರಾವ್ ಬೇಕಲ್ ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ. ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಆರ್.ಡಿ. ಮೇಘಣ್ಣನವರ್ ಉಪಸ್ಥಿತರಿರಲಿದ್ದಾರೆ.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಡಿನಾಡಿನ ಹತ್ತು ಸಾಧಕರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಸುರೇಶ್ ನೆಗಳಗುಳಿ, ಪ್ರದೀಪ್ ಬೇಕಲ್, ವಸಂತ ಕೆರೆಮನೆ, ಜಗನ್ನಾಥ ಶೆಟ್ಟಿ ಪಿ.ಕೆ., ಅಖಿಲೇಶ್ ನಗುಮುಗಮ್, ವಸಂತ ಭಾರಡ್ಕ, ಗುರುರಾಜ್ ಕಾಸರಗೋಡು, ಗಿರೀಶ್ ಪಿ.ಎಂ. ಚಿತ್ತಾರಿ ಹಾಗೂ ಮುರಳಿ ಪಾರೆಕಟ್ಟೆ ಅವರನ್ನು ಕನ್ನಡ ಸಂಘದ ವತಿಯಿಂದ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ಕನ್ನಡ ಭವನದ ಅಂತರ್‌ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2026 ಅನ್ನು ಡಾ. ಶಿಹಾನ್ ಸುಬ್ರಹ್ಮಣ್ಯ ಪಿ., ಇರಾ ನೇಮು ಪೂಜಾರಿ, ಡಾ. ರಾಜೇಶ್ ಬಿ.ವಿ., ಪಿ.ವಿ. ಪ್ರದೀಪ್ ಕುಮಾರ್ ಹಾಗೂ ಡಾ. ಶೈಲಾ ಕೆ. ವಿನ್ ಅವರಿಗೆ ಪ್ರದಾನ ಮಾಡಲಾಗುವುದು.

ಸಮಾರಂಭದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ ಸಾಂಸ್ಕೃತಿಕ ಕಲಾ ವೈಭವ ಹಾಗೂ ವಿವಿಧ ಕಲಾ ಕಾರ್ಯಕ್ರಮಗಳು ನಡೆಯಲಿವೆ. ಗುರುರಾಜ್ ಎಂ.ಆರ್. ಮತ್ತು ಮಧು ಕೋಡನಾಡು ಕಾರ್ಯಕ್ರಮ ನಿರ್ವಹಿಸಲಿದ್ದಾರೆ.

ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಹಾಗೂ ಸೇವಾ ಅಧಿಕಾರಿಗಳ ಸಂಘದ ಅಧ್ಯಕ್ಷ ರಮೇಶ್ ಕುಮಾರ್, ಸಿ ಮತ್ತು ಡಿ ದರ್ಜೆ ನೌಕರರ ಸಂಘದ ಅಧ್ಯಕ್ಷ ಧರ್ಮರಾಜು ಸಿ., ಇಲಾಖೆಯ ಎಸ್‌ಸಿ/ಎಸ್‌ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ದೊರೈ ಭಾಗವಹಿಸಲಿದ್ದಾರೆ.

ಕನ್ನಡ ಸಂಘದ ಅಧ್ಯಕ್ಷ ಕೆ.ಸಿ. ಮಂಜುನಾಥ್, ಉಪಾಧ್ಯಕ್ಷೆ ಶಬಿಸ್ತ ತಬಸ್ಸುಂ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯದರ್ಶಿ ಧರ್ಮರೇವಣ್ಣ ಜಿ.ಎಸ್., ಪ್ರಧಾನ ಕಾರ್ಯದರ್ಶಿ ಎಸ್.ಆರ್. ರಂಗರಾಮಯ್ಯ, ಖಜಾಂಚಿ ನಾಗಲಕ್ಷ್ಮಿ ಕೆ.ಎಸ್. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವವರು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!