ನ.20ರಂದು ಮಂಗಳೂರಿನಲ್ಲಿ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ

ಮಂಗಳೂರು: 2026ನೇ ಸಾಲಿನ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭ ನವೆಂಬರ್ 20ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಸಭಾಂಗಣದಲ್ಲಿ ಶುಕ್ರವಾರ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

‘ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲಾಧಾರಿತ ಮತ್ತು ವೃತ್ತಿಪರ ಸೇವೆ’ ಎಂಬ ಧ್ಯೇಯದೊಂದಿಗೆ ಸಮಾರೋಪ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದಡಿ ಕಾರ್ಯಕ್ರಮ ನಡೆಯಲಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದರು.

ಸಹಕಾರ ಸಂಘಗಳ ಜಂಟಿ ನಿಬಂಧಕ ಶಶಿಧರ್ ಪಿ. ಅವರು ಸಹಕಾರ ಸಪ್ತಾಹದ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ. ರಾಜರಾಮ ಭಟ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ. ಜಯರಾಮ ರೈ, ಮಹೇಶ್ ಹೆಗ್ಡೆ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಲಾವಣ್ಯ ಕೆ.ಆರ್. ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಪಿ.ಎಚ್. ಉಪಸ್ಥಿತರಿದ್ದರು.

ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿ, ರಮೇಶ್ ಎಚ್.ಎನ್. ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!