ಪಾಣೇಲ ಶಾಂತಿನಗರ:* ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಓಂ ಶ್ರೀ ಗಣೇಶ ಯುವಕ ಮಂಡಲ (ರಿ), ಮಹಿಳಾ ಮಂಡಳಿ ಹಾಗೂ ಕುಣಿತ ಭಜನಾ ತಂಡ ಪಾಣೇಲ ಶಾಂತಿನಗರ ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಕುರ್ನಾಡು ಪಡೀಲ್ನಿಂದ ಪಾಣೇಲ ಶಾಂತಿನಗರ ಮೈದಾನದವರೆಗೆ ಬೃಹತ್ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲು ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಇಂತಹ ಕಾರ್ಯಕ್ರಮಗಳು ಪರಿಸರ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ತದ್ಮಬಾಳಿಕೆ, ಕೊಣಾಜೆ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಡಪ ಫಜೀರು ಗುತ್ತು, ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಕೋಟ್ಯಾನ್ ಪಾಣೇಲ, ಮಹಿಳಾ ಮಂಡಳಿಯ ಅಧ್ಯಕ್ಷರಾದ ಅಮಿತಾ ದಿನೇಶ್ ಪೂಜಾರಿ ನಟ್ಟಿಲ್ಲು ಸೇರಿದಂತೆ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ, ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಡೆದ ಈ ಅಭಿಯಾನವು ಕನ್ನಡ ರಾಜ್ಯೋತ್ಸವದ ಸಂಭ್ರಮದ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಮಹತ್ವವನ್ನು ಸಾರಿತು.

