ಮಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ; 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರಿನ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭ‌ ನಡೆಯಿತು. ಅಧ್ಯಕ್ಷತೆ ವಹಿಸಿ ಸಚಿವ ಯುಟಿ ಖಾದರ್ ಮಾತನಾಡಿದರು. ಇದೇ ಸಂದರ್ಭದಲ್ಲಿ 120 ವ್ಯಕ್ತಿಗಳು ಹಾಗೂ 53 ಸಂಘ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿತರಿಸಲಾಯಿತು. ಪೊಲೀಸ್, ಎನ್‌ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯಿತು.


ಸಮಾರಂಭದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!