ಕಾಸರಗೋಡು: ಕನ್ನಡ ಸಂಘ (ನೋಂ), ವಾಣಿಜ್ಯ ತೆರಿಗೆಗಳ ಇಲಾಖೆ, ಬೆಂಗಳೂರು ಹಾಗೂ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಕಾಸರಗೋಡಿನ ಕನ್ನಡ ಭವನದ ವೇದಿಕೆಯಲ್ಲಿ ನವೆಂಬರ್ 1ರಂದು ಆಯೋಜಿಸಲಾದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಂಘಟಕ ಮುರಳಿ ಪಾರೆಕಟ್ಟೆ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ್ರಾವ್ ಬೇಕಲ್, ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಟಿ.ಆರ್. ಕೃಷ್ಣಕುಮಾರ್, ಪದ್ಮಾಕರ ಆರ್. ಕುಲಕರ್ಣಿ, ರಮೇಶ್ ಕುಮಾರ್, ವಿ. ಕುಮಾರ್, ಸಹಾಯಕ ಆಯುಕ್ತರಾದ ಕೆ. ದೊರೈ, ಕೆ.ಸಿ. ಮಂಜುನಾಥ್, ಕೆ.ಎನ್. ನವೀನ್ ಹಾಗೂ ರಾಕೇಶ್ ರಾಥೋಡ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಸುರೇಶ್ ನೆಗಳಗುಳಿ, ಪ್ರದೀಪ್ ಬೇಕಲ್, ವಸಂತ ಕೆರೆಮನೆ, ಜಗನ್ನಾಥ ಶೆಟ್ಟಿ ಪಿ.ಕೆ., ಅಖಿಲೇಶ್ ನಗುಮುಗಮ್, ವಸಂತ ಭಾರಡ್ಕ, ಗುರುರಾಜ್ ಕಾಸರಗೋಡು, ಗಿರೀಶ್ ಪಿ . ಎಂ , ಶೋಭಾ, ಸಂಧ್ಯಾರಾಣಿ ಟೀಚರ್, ರಾಜೇಶ್ ಹಾಗೂ ಸತೀಶ್ ಕೂಡ್ಲು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

