ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿ 95 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಂಘಕ್ಕೆ ಮತ್ತೊಂದು ಗರಿ; ಜಗದೀಶ್ ಅಂಚನ್ ಹರ್ಷ

ಮಂಗಳೂರು: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಮರ್ಥ ಹಾಗೂ ದಕ್ಷ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನೌಕರರ ಸಹಕಾರ ಸಂಘವು ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಸುಮಾರು 95 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಸಂಘವು ಸಹಕಾರ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಗೆ ಈ ಗೌರವ ಲಭಿಸಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ ಒಂಬತ್ತು ಬಾರಿ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಸಂಘವು ತನ್ನ ಕಾರ್ಯಕ್ಷಮತೆ ಹಾಗೂ ಸೇವಾ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಲ್ಲಿ ಅಪಾರ ಸಂತಸ ಮೂಡಿಸಿದೆ. ಈ ಸಾಧನೆಗೆ ಮಾರ್ಗದರ್ಶನ ನೀಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಜಿಲ್ಲಾ ಆಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಪ್ರತಿನಿಧಿಗಳಿಗೆ ಸಂಘದ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಜಗದೀಶ್ ಅಂಚನ್ ತಿಳಿಸಿದ್ದಾರೆ.

ಈ ಪ್ರಶಸ್ತಿಯು ಸಂಘದ 95 ವರ್ಷಗಳ ಸೇವಾ ಪಯಣಕ್ಕೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!