
ಸೂರಂಬೈಲು: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅತ್ಯುತ್ತಮ ಸಾಧನೆ ಮಾಡಿದ್ದಾನೆ.

ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಗಿರಿಧರ್ ಎಸ್. ಅವರು ಹೈಸ್ಕೂಲ್ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಎ ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ರಕ್ಷಕ-ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ. ಗಿರಿಧರ್ ಅವರ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.


