ವಾಣಿಜ್ಯ ವಿದ್ಯಾರ್ಥಿಗಳಿಗೆ ವಿಜ್ಞಾನದ ಜ್ಞಾನ ಸೇತು: ಮಂಗಳೂರಿನಲ್ಲಿ ವಿಶೇಷ ಉಪನ್ಯಾಸ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅಂತರ್ಶಿಸ್ತೀಯ ಜ್ಞಾನ ವಿನಿಮಯಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ‘ಜ್ಞಾನ ಸೇತು ಬಿಯಾಂಡ್ ಕಾಮರ್ಸ್’ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾದ ‘ಜ್ಞಾನ ಸೇತು ಬಿಯಾಂಡ್ ಕಾಮರ್ಸ್’ ಮೊದಲ ಆವೃತ್ತಿಯ ಕಾರ್ಯಕ್ರಮದಲ್ಲಿ ಸೂಕ್ಷ್ಮಜೀವಶಾಸ್ತ್ರದ ಮೂಲಭೂತ ಪರಿಕಲ್ಪನೆಗಳು ಹಾಗೂ ಅದರ ಪ್ರಸ್ತುತತೆಯ ಕುರಿತು ವಿಶೇಷ ಉಪನ್ಯಾಸ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ಸಹಪ್ರಾಧ್ಯಾಪಕಿ ಡಾ. ಭಾರತಿ ಪ್ರಕಾಶ್ ಅವರು ಸೂಕ್ಷ್ಮಜೀವಿಗಳ ವಿಧಗಳು, ಮಾನವನ ಜೀವನದಲ್ಲಿ ಅವುಗಳ ಪಾತ್ರ ಹಾಗೂ ಆರೋಗ್ಯ, ಆಹಾರ ಮತ್ತು ಪರಿಸರ ಕ್ಷೇತ್ರಗಳಲ್ಲಿ ಅವುಗಳ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎ. ಸಿದ್ದೀಕ್ ಅವರು ಮಾತನಾಡಿ, ವಾಣಿಜ್ಯ ವಿದ್ಯಾರ್ಥಿಗಳು ಇತರ ಜ್ಞಾನಶಾಖೆಗಳ ಬಗ್ಗೆಯೂ ಅರಿವು ಬೆಳೆಸಿಕೊಳ್ಳುವ ಮೂಲಕ ಅಂತರ್ಶಿಸ್ತೀಯ ಅಧ್ಯಯನಕ್ಕೆ ಒತ್ತು ನೀಡಬೇಕು ಎಂದರು.

ಡಾ. ವೆಂಕಟೇಶ್ ನಾಯಕ್, ಡಾ. ದಿನಕರ್ ಉಪಸ್ಥಿತರಿದ್ದರು. ಶಾಂತಿಕೃಪಾ ಸ್ವಾಗತಿಸಿ, ಶ್ರುತಿ ವಂದಿಸಿದರು. ಪ್ರಿಯಾಲ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!