ಕಾಸರಗೋಡು ಕನ್ನಡ ಗ್ರಾಮಕ್ಕೆ ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರತಿನಿಧಿಗಳ ಭೇಟಿ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),ಕಾಸರಗೋಡು ಇದರ 36 ನೇ ಸಂಸ್ಥಾಪನಾ ವರ್ಷಾಚರಣೆ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 61ನೇ ವರ್ಷದ ಜನ್ಮದಿನಾಚರಣೆ -61 ನೇ ಕನ್ನಡ ಯಾತ್ರೆಯನ್ನು ಅಭಿನಂದಿಸಲು ಹಾಸನದ ಶ್ರೀ ಕ್ಷೇತ್ರ ಕಬ್ಬಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಪುಣ್ಯ ಕ್ಷೇತ್ರ ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಗಳವರ ಶುಭ ಆಶೀರ್ವಾದಗಳನ್ನು ಅವರ ಆದೇಶದ ಮೇರೆಗೆ ಶ್ರೀ ಮಠದ ಪ್ರತಿನಿಧಿಗಳಾದ ಕೀರ್ತಿ ಎಚ್ ಆರ್ ಗೌಡ ,ದಿವಾಕರ ಕೆ ಜೆ,ವಿವೇಕ ಬಿ ಎನ್ ,ಪ್ರಭಾಕರ ಡಿ ಕೆ ಅವರು ಕಾಸರಗೋಡು ಕನ್ನಡ ಗ್ರಾಮಕ್ಕೆ 2026 ನವೆಂಬರ್ 4 ರಂದು ಆಗಮಿಸಿ ಶಿವರಾಮ ಕಾಸರಗೋಡು ಅವರಿಗೆ ಶುಭ ಹಾರೈಸಿದರು.

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 28, ಮತ್ತು 29 ರಂದು ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ -2026 ,ಕೇರಳ- ಕರ್ನಾಟಕ ಉತ್ಸವ ,ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಕುರಿತು ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ2026 ನವೆಂಬರ್ 16 ಸೋಮವಾರದಂದು ಹಾಸನದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಮತ್ತು ಮಹಾ ಕುಂಭಾಭಿಷೇಕವು ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ ನಿರ್ಮಲಾನಂದನಾಥ ಮಹಾಸ್ವಾಮಿಜಿಯವರ ನೇತೃತ್ವ ,ಮಾರ್ಗದರ್ಶನ ಹಾಗೂ ಅನುಗ್ರಹ ದೊಂದಿಗೆ ನಡೆಯಲಿದೆ .

ಈ ವಿಶೇಷ ಕಾರ್ಯಕ್ರಮಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಸ್ವಾಮೀಜಿಯವರ ನಿರ್ದೇಶನದಂತೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಆಮಂತ್ರಣ ಪತ್ರಿಕೆಯನ್ನು ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!