
ಪೆರ್ಲ: ಎಣ್ಮಕಜೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್‌ನ ಜಂಟಿ ಆಶ್ರಯದಲ್ಲಿ ಪೆರ್ಲ ಇಂದಿರಾ ಭವನದಲ್ಲಿ 17ನೇ ಜಬ್ಬಾರ್ ಹುತಾತ್ಮ ದಿನವನ್ನು ಆಚರಿಸಲಾಯಿತು.


2009ರ ನವೆಂಬರ್ 3ರಂದು ಸಿಪಿಐ(ಎಂ) ಕಾರ್ಯಕರ್ತರಿಂದ ಕ್ರೂರವಾಗಿ ಹತ್ಯೆಗೀಡಾದ ಅಂದಿನ ಯುವ ಕಾಂಗ್ರೆಸ್ ಮಂಡಲ ಕಾರ್ಯದರ್ಶಿಯಾಗಿದ್ದ ಜಬ್ಬಾರ್ ಪೆರ್ಲ ಎಂಬ ಯುವಕನನ್ನು ಹತ್ಯೆಗೈದು ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಬಹುದೆಂದು ದುರುದ್ದೇಶ ಹೊಂದಿದ್ದವರ ಆಶಯ ಈಡೇರಲಿಲ್ಲ. ಬದಲಾಗಿ, ಅವರ ರಕ್ತದಿಂದ ಸ್ಫೂರ್ತಿ ಪಡೆದು ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳು ಇಂದು ಇನ್ನಷ್ಟು ಬಲಿಷ್ಠವಾಗಿ ಬೆಳೆದಿವೆ ಎಂದು ಸಭೆಯನ್ನು ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಪಿ. ಪ್ರದೀಪ್ ಕುಮಾರ್ ಹೇಳಿದರು.

ಮಂಡಲ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಗಂಭೀರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ ಜೆ.ಎಸ್., ಲಕ್ಷ್ಮಣ ಪ್ರಭು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕೇಯನ್ ಪೆರಿಯ, ಎಣ್ಮಕಜೆ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ಟೀಚರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕನಾಥ ಶೆಟ್ಟಿ, ಉಪಾಧ್ಯಕ್ಷ ಆಮು ಅಡುಕಸ್ಥಳ, ಶೆರಿಲ್ ಕಾಯ್ಯಂಕೂಡಲ್, ಯುವ ಕಾಂಗ್ರೆಸ್ ಅಸೆಂಬ್ಲಿ ಅಧ್ಯಕ್ಷ ಜುನೈದ್ ಉರುಮಿ, ಬ್ಲಾಕ್ ಪಂಚಾಯತ್ ಸದಸ್ಯೆ ಮಿಸಿರಿಯಾ ಕರೀಂ ಹಾಗೂ ಮಹಿಳಾ ಕಾಂಗ್ರೆಸ್ ಮಂಡಲ ಅಧ್ಯಕ್ಷೆ ಪ್ರಿನ್ಸಿ ಸೇರಿದಂತೆ ಹಲವು ಗಣ್ಯರು ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಾಲಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಅಫ್ತಾಲ್ ಕಾಟುಕುಕ್ಕೆ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಯುವ ಕಾಂಗ್ರೆಸ್ ಮಂಡಲ ಅಧ್ಯಕ್ಷ ಫಾರೂಕ್ ಪಿ.ಎಂ. ಸ್ವಾಗತಿಸಿದರು. ಉಪಾಧ್ಯಕ್ಷ ನಜೀಬ್ ಶೇಣಿ ವಂದಿಸಿದರು.


