ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

ಮಂಗಳೂರು: ನಗರದ ಜೆಪ್ಪು ರಾಮಕ್ಷತ್ರಿಯ ಸಂಘದ ನೂತನ ಸಮಿತಿಯ ಪದಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮವು ನವೆಂಬರ್ 3ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಅವರ ಸಾರಥ್ಯದ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಸಂಸ್ಥೆ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಕಾರ್ಯಕ್ರಮ ಉದ್ಘಾಟಿಸಿ, ರಾಮಕ್ಷತ್ರಿಯ ಸಂಘ ಜೆಪ್ಪು ಇದರ ನೂತನ ಅಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು ಹಾಗೂ ಪದಾಧಿಕಾರಿಗಳಿಗೆ ಶಾಲು ಮತ್ತು ಹಾರ ಹಾಕಿ ಅಭಿನಂದಿಸಿದರು. ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ, ರಾಮಕ್ಷತ್ರಿಯ ಸಮಾಜದ ಹಿರಿಯ ಮುಂದಾಳು ಹಾಗೂ ಸಮಾಜ ಸೇವಕ ಕೃಷ್ಣ ಜೆ. ಪಾಲೇಮಾರ್ ಅವರನ್ನು ಕನ್ನಡ ಭವನದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಅವರು ಗೌರವಿಸಿ ಸನ್ಮಾನಿಸಿದರು.

ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಸುದೇಶ್ ರಾವ್ ಹಾಗೂ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ ಸಹಕರಿಸಿದರು. ರಾಮಕ್ಷತ್ರಿಯ ಸಂಘ ಜೆಪ್ಪು ಮಂಗಳೂರು ಅಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು ಅಭಿನಂದನಾ ಭಾಷಣ ಮಾಡಿದರು. ವಿಶ್ವ ರಾಮಕ್ಷತ್ರಿಯ ಪದಾಧಿಕಾರಿಗಳು ಹಾಗೂ ರಾಮಕ್ಷತ್ರಿಯ ಸಂಘ ಮಂಗಳೂರಿನ ಕೋಶಾಧಿಕಾರಿ ನಾಗರಾಜ್ ಮದ್ದೋಡಿ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!