
ಮಂಗಳೂರು: ರಾಜ್ಯ ಸರ್ಕಾರ ನಂದಿನಿ ಹಾಲು ಮತ್ತು ಮೊಸರಿನ ದರ ಹಾಗೂ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಗುರುವಾರ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಪಿವಿಎಸ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿದ ಬಿಜೆಪಿ ಮುಖಂಡರು, ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುತ್ತಿರುವ ಸರ್ಕಾರದ ಕ್ರಮವನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಮಂಜುಳಾ ರಾವ್, ಪೂರ್ಣಿಮಾ, ವಸಂತ ಕುಮಾರ್ ಹಾಗೂ ನಂದನ್ ಮಲ್ಯ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು


