ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ 13ನೇ ಆರೋಪಿ ಬಂಧನ …. ! ?

ಬಂಟ್ವಾಳ, : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬಾತನ ಮೇಲಿನ ಹಲ್ಲೆ ಕರಾವಳಿಯ ಶಾಂತಿಯನ್ನೇ ಕದಡಿತ್ತು . ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯನ್ನು ಬಂಧಿಸಿದ್ದಾರೆ.
ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!